ಅಖಿಲ ಭಾರತ ನಾಗರೀಕ ಅಥ್ಲೆಟಿಕ್ಸ್ ಕ್ರೀಡಾ ಕೂಟವು ಮಾ.26 ರಿಂದ 28ರ ತನಕ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ತಂಡವನ್ನು ಪ್ರತಿನಿಧಿಸಿ ಸುಳ್ಯದ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯೀಕರಣ ವಿಭಾಗದ ಸಹಾಯಕ ಇಂಜಿನಿಯರ್ ಮಣಿಕಂಠ ಅವರು ಭಾಗವಹಿಸಲಿದ್ದಾರೆ. ಅಥ್ಲೆಟಿಕ್ಸ್ ಕೂಟದಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಇವರು ಸ್ಪರ್ಧಿಸಲಿದ್ದಾರೆ. ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟದಲ್ಲಿ ಜಾವೆಲಿನ್ ತ್ರೋ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಮಣಿಕಂಠ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪಕರು, ತರಬೇತುದಾರರು ಸೇರಿ 23 ಪುರುಷರು, 15 ಮಹಿಳೆಯರು ಸೇರಿ ರಾಜ್ಯದ ಒಟ್ಟು 38 ಜನ ಸರಕಾರಿ ನೌಕರ ಕ್ರೀಡಾಪಟುಗಳು ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕೂಟಕ್ಕೆ ಆಯ್ಕೆಯಾಗಿದ್ದು ಮಣಿಕಂಠ ಜಾವೆಲಿನ್ ಎಸೆತದಲ್ಲಿ ಸ್ಪರ್ಧಿಸಲಿದ್ದಾರೆ.
- Thursday
- November 21st, 2024