ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ಜಲಸಂಜೀವಿನಿ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಮಾ.24 ರಂದು ಬೆಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಿಯ ಕಲ್ಲೆಮಠ ಇವರುಗಳು ಪ್ರಶಸ್ತಿ ಸ್ವೀಕರಿಸಿದರು. ಹಿಂದುಳಿದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿ ವಿತರಿಸಿದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 21st, 2024