ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಂಬೆತ್ತಾಡಿ ನಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ಅವಿವಾಹಿತರಾಗಿದ್ದು ತಂದೆ, ತಾಯಿ,ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
- Thursday
- November 21st, 2024