ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ‘ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ’ ಎಂಬ ಕಲ್ಪನೆಯೊಂದಿಗೆ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯ
ಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಪ್ರಸಾರ ರಾಜ್ಯ ಸಚಿವ ಡಾ|| ಎಲ್. ಮುರುಗನ್ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತರಿರುವರು.
ರಾಜ್ಯದಲ್ಲಿ ಒಟ್ಟು 300 ವಾಹನ ವಿತರಣೆಯಾಗಲಿದೆ. ಆ ಮೂಲಕ ಸರಕಾರ ಸ್ವ ಉದ್ಯೋಗಕ್ಕೆ ಉತ್ತಮ ಅವಕಾಶ ಕಲ್ಪಿಸಿದೆ.