Ad Widget

ಇಂದು ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ -ಮತ್ಸ್ಯ ಸಂಪದ ಯೋಜನೆಯಡಿ ಸ್ವ ಉದ್ಯೋಗಕ್ಕೆ ಅವಕಾಶ

ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ‘ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ’ ಎಂಬ ಕಲ್ಪನೆಯೊಂದಿಗೆ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯ
ಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಪ್ರಸಾರ ರಾಜ್ಯ ಸಚಿವ ಡಾ|| ಎಲ್. ಮುರುಗನ್ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತರಿರುವರು.

ರಾಜ್ಯದಲ್ಲಿ ಒಟ್ಟು 300 ವಾಹನ ವಿತರಣೆಯಾಗಲಿದೆ. ಆ ಮೂಲಕ ಸರಕಾರ ಸ್ವ ಉದ್ಯೋಗಕ್ಕೆ ಉತ್ತಮ ಅವಕಾಶ ಕಲ್ಪಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!