ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ “ಸ್ವಾವಲಂಬಿ ಬದುಕಿಗಾಗಿ ಸ್ವ-ಉದ್ಯೋಗ” ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಮೀನುಗಾರಿಕೆ ನಿರ್ದೇಶಕರಾದ ರಾಮಾಚಾರ್ಯ ಪುರಾಣಿಕ್, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಆಂಜನಪ್ಪ, ಮೀನುಗಾರಿಕಾ ನಿರ್ದೇಶನಾಲಯದ ಅಪರ ನಿರ್ದೇಶಕ ತಿಪ್ಪೇಸ್ವಾಮಿ, ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ದಿನೇಶ್ ಕಳ್ಳೇರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಗಣೇಶ್, ದ.ಕ. ಮೀನುಗಾರಿಕೆ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಸುಳ್ಯ ನಗರ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕಿಶೋರಿ ಶೇಟ್, ಸುಳ್ಯ ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಪ್ರಮುಖ ಮುಖಂಡರು, ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳು ಉಪಸ್ಥಿತರಿದ್ದರು. ಮೀನುಗಾರಿಕಾ ನಿರ್ದೇಶನಲಾಯದ ಅಪರ ನಿರ್ದೇಶಕರಾದ ದಿನೇಶ್ ಕುಮಾರ್ ಸ್ವಾಗತಿಸಿ, ತಿಪ್ಪೇಸ್ವಾಮಿ ವಂದಿಸಿದರು. ಲತಾಶ್ರೀ ಸುಪ್ರೀತ್ ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024