ಐವರ್ನಾಡು ಗ್ರಾಮದ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಿಸಲು 35 ವರ್ಷದಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ಬಿರ್ಮುಕಜೆ,ಚಲ್ಲತ್ತಡಿ, ಸಾರಕೆರೆಗೆ ಹಾದು ಹೋಗುವ ರಸ್ತೆಯಲ್ಲಿ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಾಣದ ಬಗ್ಗೆ ಕಳೆದ 35 ವರ್ಷದಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದೇ ರಾಜಕೀಯ ನಾಯಕರು ಹಾಗೂ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದು, ಇದನ್ನು ಖಂಡಿಸಿ ನಾವು ಮುಂಬರುವ ಚುನಾವಣೆಗೆ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಬ್ಯಾನರ್ ಅಳವಡಿಸಿದ್ದಾರೆ.
- Sunday
- November 24th, 2024