- Sunday
- November 24th, 2024
ಕಲ್ಲಪಳ್ಳಿಯ ಪ್ರೀತಿ ಕಲಾ ಮತ್ತು ಕ್ರೀಡಾ ಸಂಘದ ವತಿಯಿಂದ ದಿ.ಮೋನಪ್ಪ ಗೌಡ ನೆಡ್ಚಿಲು ಮೂಲೆಹಿತ್ಲು ಇವರ ಸ್ಮರಣಾರ್ಥ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಮಾ.11ರಂದು ನಡೆಯಿತು. ಪ್ರಥಮ ಬಹುಮಾನ ರೂ.20,001 ನ್ನು ಮಾತೃಶ್ರೀ ಕಲ್ಲಪಳ್ಳಿ ತಂಡ ಹಾಗೂ ದ್ವಿತೀಯ ಬಹುಮಾನ 15,001 ನ್ನು ಎನ್‌ಎಂಸಿ ಸುಳ್ಯ ಪಡೆದುಕೊಂಡಿತು. ಸೆಮಿಫೈನಲ್ ನಿರ್ಗಮಿತ ತಂಡಗಳಿಗೆ 5001...
ದ.ಕ. ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಜಿಲ್ಲಾ ಸಮಾವೇಶ ಮಾ.19 ರಂದು ಪಂಜದಲ್ಲಿ ನಡೆಯಲಿದ್ದು, ಪೂರ್ವಭಾವಿ ಸಭೆಯು ಇಂದಯ ಅಯ್ಯನಕಟ್ಟೆ ದೀನ್ ದಯಾಳ್ ಸಭಾಂಗಣದಲ್ಲಿ ಜರಗಿತು. ಈ ಸಭೆಯಲ್ಲಿ ಸಚಿವರಾದ ಅಂಗಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿ.ಪಂ.ಮಾಜಿ ಸದಸ್ಯೆ ಪುಷ್ಪಾವತಿ ಬಾಳಿಲ, ವಸಂತ ನಡುಬೈಲು ಹಾಗೂ...
ನಾಲ್ಕೂರು ಗ್ರಾಮದ ಸಾಲ್ತಾಡಿ ರಾಮಕೃಷ್ಣ ನಾಯರ್ ಅವರು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರುಕ್ಮಿಣಿ, ಪುತ್ರರಾದ ಉಣ್ಣಿಕೃಷ್ಣನ್, ಶಿವಪ್ರಸಾದ್ ಹಾಗೂ ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮಲ್ಲಾರ ರಾಮಚಂದ್ರ ಗೌಡರು(59) ಮಾ.೪ ರಂದು ನಿಧನರಾದರು.ಇವರು ಕೆಲ ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ.೪ರಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಸಂಪಾಜೆ ಗ್ರಾಮದ ದೊಡ್ಡಡ್ಕ ಮೊಗೇರ್ಕಳ ದೇವಸ್ಥಾನ ಬಳಿ ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಿದ ನೂತನ ಬಸ್ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು.
ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ದೊಡ್ಡಕುಮೇರಿ, ತೊಡಿಕಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಿತು. ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.*ಕಾರ್ಯಕ್ರಮದಲ್ಲಿ ಅರಂತೋಡು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್...
ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ರಾಜರಾಂಪುರ - ದೊಡ್ಡಡ್ಕ ದಲ್ಲಿ 42ನೇ ವರ್ಷದ ಶ್ರೀ ಆದಿಬ್ರಹ್ಮ ಮೊಗೇರ್ಕಳ ನೇಮೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ...
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ – ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ
https://youtu.be/BuOrR0IMPWk ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು. ರ‌್ಯಾಲಿಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಅಂಗಾರ,ಈಶ್ವರಪ್ಪ, ಇಂಧನ ಸಚಿವ ಸುನಿಲ್ ಕುಮಾರ್, ಸ್ಥಳೀಯ ನಾಯಕರುಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೀನು ಸಾಕಣಿಕೆಗೆ ಆಸಕ್ತ ಫಲಾನುಭವಿಗಳಿಗೆ ಇಂದು ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮಡೆಂಜಿ ಮೀನು ಮರಿಗಳನ್ನು ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸುಮಾರು ಐದು ಸಾವಿರ ಮೀನು ಮರಿಗಳನ್ನು ವಿತರಿಸಲಾಯಿತು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಹಾಶೀರ್ ಮತ್ಯ...
ಸುಮಾರು 2 ಕೋಟಿ ಅನುದಾನದಲ್ಲಿ ನಿರ್ಮಾಣ ಗೊಳ್ಳಲಿರುವ ನೂತನ ನಿರೀಕ್ಷಣಾ ಮಂದಿರ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷರಾದ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಶ್ರೀಮತಿ...
Loading posts...
All posts loaded
No more posts