Ad Widget

ದೈವ ನರ್ತಕ ಸೇವೆ ಸಂದರ್ಭ ಕುಸಿದುಬಿದ್ದು ಮೃತಪಟ್ಟ ಕಾಂತು ಅಜಿಲ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್


  • ಮಂಗಳೂರು: ಮಾರ್ಚ್ 30 ರಂದು ಕಡಬ ತಾಲೂಕಿನ ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮ ನಡೆಯುತ್ತಿದ್ದ ಸಂದರ್ಭದಲ್ಲಿ ದೈವ ನರ್ತನ (Daivaradane) ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರೂ 1-00 ಲಕ್ಷದ ಆರ್ಥಿಕ ನೆರವು ಘೋಷಣೆ ಮಾಡಿದೆ.

ಇಡ್ಯಡ್ಕ ಕುಟುಂಬದ ಮನೆಯಲ್ಲಿ 2 ನರ್ತನ ಸೇವೆ ನೆರವೇರಿಸಿ ಶಿರಾಡಿ ದೈವದ ನರ್ತನ ಸೇವೆ ಪ್ರಾರಂಭಿಸಿ ಸ್ವಲ್ಪ ಸಮಯದಲ್ಲೇ ಕುಸಿದು ಬಿದ್ದಿದ್ದರು. ಆ ಸಂದರ್ಭ ಕಲ್ಕುಡ ದೈವವು ನರ್ತನ ಸೇವೆ ನೀಡುತ್ತಿತ್ತು. ಈ ದೃಶ್ಯ ವೈರಲ್ ಆಗಿತ್ತು .

. . . . . . . . .

ಕೂಡಲೇ ನೇಮೋತ್ಸವ ನೆರವೇರಿಸುತಿದ್ದ ಕುಟುಂಬ ಆಸ್ಪತ್ರೆಗೆ ಸಾಗಿಸಿದರು ಫಲಕಾರಿಯಾಗಲಿಲ್ಲ. ದೈವರಾಧನೆಯ ಇತಿಹಾಸದಲ್ಲಿ ಈ ಘಟನೆಯನ್ನು ಅತೀ ಅಪರೂಪದ ಘಟನೆ ಎಂಬಂತೆ ಬಿಂಬಿಸಲಾಗಿತ್ತು. ಈ ಹಿಂದೆ ಉಡುಪಿಯಲ್ಲೊಂದು ಘಟನೆ ನಡೆದಿತ್ತು ಎನ್ನಲಾಗಿದೆ.

. . . . . . .

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.

ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು.

ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading