Ad Widget

ಸುಬೇದಾರ್ ಏಕನಾಥ ಶೆಟ್ಟಿಗೆ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪ್ರದಾನ

. . . . . .

ಕೆದಂಬಾಡಿ ರಾಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದಿದ್ದ ಅಮರಸುಳ್ಯ ಹೋರಾಟದ ವಿಷಯ ಪಠ್ಯದಲ್ಲಿ ಸೇರ್ಪಡೆಗೊಂಡು ಯುವ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು ವತಿಯಿಂದ ನಗರದಲ್ಲಿ ಬುಧವಾರ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ಸಂಸ್ಮರಣಾ ದಿನಾಚರಣೆ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಪಠ್ಯದಲ್ಲಿ ಅಳವಡಿಕೆ ಬಗ್ಗೆ ಸಿಎಂ ಈಗಾಗಲೇ ಭರವಸೆ ನೀಡಿದ್ದಾರೆ. ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆ ಸ್ಥಾಪಿಸುವ ಮೂಲಕ ಅವರಿಗೆ ಗೌರವ ಸಂದಿದೆ. ಕೆದಂಬಾಡಿ ರಾಮಯ್ಯ ಗೌಡ ಹಾಗೂ ಅವರ ಹೆಸರಿನ ಶೌರ್ಯ ಪ್ರಶಸ್ತಿ ಪಡೆದ ಏಕನಾಥ ಶೆಟ್ಟಿ ಅವರು ಸಮಾಜಕ್ಕಾಗಿ ಬದುಕಿದ ಪುಣ್ಯಾತ್ಮರು ಎಂದರು.

ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿಯನ್ನು ಭಾರತೀಯ ಭೂ ಸೇನೆಯ ನಿವೃತ್ತ ಯೋಧ, 2016ರಲ್ಲಿ ನಿಗೂಢವಾಗಿ ಕಣ್ಮರೆಯಾಗಿ ಇನ್ನೂ ಪತ್ತೆಯಾಗದ ಅಂಡಮಾನ್‌ಗೆ ತೆರಳುತ್ತಿದ್ದ ವಾಯುಸೇನೆಯ ವಿಮಾನದಲ್ಲಿದ್ದ 18 ಸುಬೇದಾರ್ ಏಕನಾಥ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಏಕನಾಥ ಶೆಟ್ಟಿ ಅವರ ಪತ್ನಿ ಜಯಂತಿ ಶೆಟ್ಟಿ ಹಾಗೂ ಮಕ್ಕಳು ಪ್ರಶಸ್ತಿ ಸ್ವೀಕರಿಸಿದರು.

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಮಹಾಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಸ್ಲಿಂ ಧರ್ಮಗುರು ಯು.ಕೆ. ಅಬ್ದುಲ್ ಅಜೀಜ್ ದಾರಿಮಿ, ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ದ.ಕ. ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಉಪಸ್ಥಿತರಿದ್ದರು. ಉಪಾಧ್ಯಕ್ಷ ಪಿ.ಎಚ್.ಆನಂದ್, ಸಂಘಟನಾ ಕಾರ್ಯದರ್ಶಿ ಅಕ್ಷಯ್ ಕುರುಂಜಿ, ಚಂದ್ರ ಕೋಲ್ದಾರ್, ಕುಶಾಲಪ್ಪ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಸಂಚಾಲಕ ಭಾಸ್ಕರ್ ದೇವಸ್ಯ ಸ್ವಾಗತಿಸಿ, ರಕ್ಷಿತ್ ಪುತ್ತಿಲ ಪ್ರಶಸ್ತಿ ಪತ್ರ ವಾಚಿಸಿದರು. ಕೋಶಾಧಿಕಾರಿ ಶಿವರಾಮ ಗೌಡ ನಿನ್ನಿಕಲ್ ವಂದಿಸಿ, ಸುಶ್ಮಿತಾ ಕಡಪಳ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!