ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಏ.11 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.
ಇಂದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಸುನಿಲ್ ಕುಮಾರ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಮನೋಜ್ ಕುಮಾರ್, ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರುಶನ ಪಡೆದರು.
ಕೊರಗಜ್ಜ ಕ್ಷೇತ್ರಕ್ಕೆ ಭೇಟಿ:
ಬಳಿಕ ಸುನಿಲ್ ಕುಮಾರ್ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಸ್ವಾಮಿ ಕೊರಗಜ್ಜ ದೈವದ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದವರು ಉಪಸ್ಥಿತರಿದ್ದರು.
- Tuesday
- December 3rd, 2024