

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇರಿಕಟ್ಟದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಚಾಮುಂಡೇಶ್ವರಿ ಮತ್ತು ಗುಳಿಗ ದೈವದ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಏ.02 ಮತ್ತು 03 ರಂದು ವಿವಿಧ ತಾಂತ್ರಿಕ ಮತ್ತು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ವೇದಬ್ರಹ್ಮ ಸುದರ್ಶನ ಎಸ್.ಎನ್ ಭಟ್ ಇವರ ನೇತೃತ್ವದಲ್ಲಿ ನಡೆಯಿತು.
ಏ.02 ರಂದು ಸಂಜೆ ತಂತ್ರಿಗಳ ಆಗಮನ, ಸಪ್ತ ಶುದ್ಧಿ, ಸ್ವಸ್ತಿ ಪುಣ್ಯಾಹ, ವಾಸ್ತುಪೂಜೆ, ವಾಸ್ತು ಬಲಿ, ರಾಕ್ಷೋಘ್ನಹೋಮ, ಆಧಿವಾಸ ಹವನ, ಧಾನ್ಯಾಧಿವಾಸ ಕಲಶ ಪೂರಣ ನಂತರ ಅನ್ನಸಂತರ್ಪಣೆ ನಡೆಯಿತು.
ಏ.03 ರಂದು ಬೆಳಿಗ್ಗೆ ಗಣಪತಿ ಹವನ ಮತ್ತು ಪ್ರತಿಷ್ಠಾಂಗ ಹವನ, ವೇದಪಾರಾಯಣ, ಚಾಮುಂಡಿ ಪ್ರತಿಷ್ಠೆ, ಗುಳಿಗ ಪ್ರತಿಷ್ಠೆ, ಕಲಶಾಭಿಷೇಕ ನಡೆಯಿತು. ನಂತರ ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಂತರ ಭಜನಾ ಕಾರ್ಯಕ್ರಮ ಹಾಗೂ ಸಂಜೆ ದುರ್ಗಾಪೂಜೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ನಂತರ ರಾತ್ರಿ ಶ್ರೀ ಶಾರದಾಂಬ ಯಕ್ಷಗಾನ ಅಧ್ಯಯನ ಕೇಂದ್ರ ಕಲಾಕ್ಷೇತ್ರ ಪಂಜ ಇದರ ವಿದ್ಯಾರ್ಥಿಗಳಿಂದ ಕದಂಬ ಕೌಶಿಕೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.