ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳ ಹಾಗು ಪ್ರಮುಖ ನಾಯಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗೊಂದಲಕ್ಕೆ ಪರಿಹಾರ ಮಾಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ ಸುಳ್ಯದಲ್ಲಿ ಪಕ್ಷವನ್ನು ಗೆಲ್ಲಿಸಿ ತನ್ನಿ ಎಂದು ಸೂಚನೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುವಂತ್ತಿಲ್ಲ. ನಮ್ಮ ಸರ್ಕಾರ ಬರುತ್ತದೆ ಆವಾಗ ಸಹಕಾರ ಮಾಡುತ್ತೇನೆ ಎಂದು ನಂದಕುಮಾರ್ ರವರಿಗೆ ಖಚಿತ ಭರವಸೆ ನೀಡಿದ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಕೃಷ್ಣಪ್ಪರಿಗೆ ಸೂಚನೆ ನೀಡಿದರು. ಸುಳ್ಯದಲ್ಲಿರುವ ಪಕ್ಷದ ಕಾರ್ಯಕರ್ತರಲ್ಲಿ ಇರುವ ಗೊಂದಲವನ್ನು ಬಗೆಹರಿಸುವಲ್ಲಿ ಕೈ ಜೋಡಿಸಬೇಕೆಂದು ರಮಾನಾಥ್ ರೈ ಅವರಿಗೆ ಕರೆ ಮಾಡಿ ತಿಳಿಸಿದರು. ಎ ಐ ಸಿ ಸಿ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೆವಾಲರೊಂದಿಗೆ ಕರೆ ಮಾಡಿ ಚರ್ಚಿಸಿದ್ದಾರೆ.
ಏ.14 ರಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುಳ್ಯದ ರಾಜಕೀಯ ವಿದ್ಯಮಾನದ ಬಗ್ಗೆ ಬೇರೆ ಬೇರೆ ರೀತಿಯ ವರದಿಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬರುತ್ತಿದ್ದು ಇದು ಸತ್ಯಕ್ಕೆ ದೂರವಾಗಿದೆ. ಕಾರ್ಯಕರ್ತರು ಅಭಿಮಾನಿಗಳು ಮತ್ತು ಮತದಾರರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬೇಡಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.