ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದೂ ಪರ ಪ್ರಮುಖ ವಕೀಲರಾದ ಪಿ. ಕೃಷ್ಣಮೂರ್ತಿ ಅವರ ಮೇಲೆ ಮಡಿಕೇರಿಯಲ್ಲಿ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ವಕೀಲ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರ್ ನಲ್ಲಿ ಹಿಂತಿರುಗುವಾಗ ಕರ್ನಾಟಕದ ಚೆಟ್ಟಳ್ಳಿಯಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ಮನವಿಯನ್ನು ನೀಡಲಾಯಿತು.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಹಿಂದೂ ಪರ ವಕೀಲರ ಮೇಲೆ ನಡೆದಿರುವ ದಾಳಿ ಅತ್ಯಂತ ಗಂಭೀರವಾಗಿದೆ. ಇದರ ಹಿಂದೆ ಅರ್ಬನ್ ನಕ್ಸಲರ ಕೈವಾಡ ಇರುವ ಸಾದ್ಯತೆ ಇದೆ. ಈ ಪ್ರಕರಣದಲ್ಲಿ ವಕೀಲರ ಮೇಲೆ ಒತ್ತಡ ಹೇರಲು ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ದಾಳಿಯಲ್ಲಿ ವಕೀಲ ಕೃಷ್ಣಮೂರ್ತಿ ಬದುಕುಳಿದಿದ್ದರೂ ಅವರ ಮೇಲೆ ಮತ್ತೊಮ್ಮೆ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಾಗಾಗಿ ಅವರಿಗೆ ಸಶಸ್ತ್ರ ಪೊಲೀಸ್ ರಕ್ಷಣೆಯನ್ನು ನೀಡಬೇಕು. ಈ ಹೇಡಿತನದ ದಾಳಿಯ ಹಿಂದೆ ’ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಯಂತಹ ಭಯೋತ್ಪಾಧಕ ಜಿಹಾದಿ ಸಂಘಟನೆ ಅಥವಾ ಗೌರಿ ಲಂಕೇಶ್ ಅವರನ್ನು ಬೆಂಬಲಿಸುವ ಅರ್ಬನ್ ನಕ್ಸಲಿಸ್ಟ್‌ಗಳು ಯಾರು ಎಂಬುದನ್ನು ತನಿಖೆ ಮಾಡುವುದು ಅನಿವಾರ್ಯವಾಗಿದೆ.
ವಕೀಲರಾದ ಕೃಷ್ಣಮೂರ್ತಿ ಯಾರೊಂದಿಗೂ ದ್ವೇಷ ಹೊಂದಿರಲಿಲ್ಲ. ಅವರು ಹಿಂದೂ ಧರ್ಮದ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಈ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿರುವ ಸಾಧ್ಯತೆ ಹೆಚ್ಚಿದೆ. ಈ ದಾಳಿ ಹಿಂದುತ್ವದ ಮೇಲಿನ ದಾಳಿಯಾಗಿದೆ. ಈ ಸಂಘಟಿತ ಅಪರಾಧವನ್ನು ಭೇದಿಸಿ ಇದರ ಹಿಂದಿರುವ ಸೂತ್ರಧಾರನನ್ನು ಪತ್ತೆ ಮಾಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಕರ್ನಾಟಕವು ಈ ಹಿಂದೆ ಹಿಂದೂಪರ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗಳನ್ನು ಕಂಡಿದೆ, ಅನೇಕರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುತ್ತಿರುವ ಈ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಧರ್ಮಪ್ರೇಮಿಗಳಾದ ಬಾಲಕೃಷ್ಣ ನಾಯಕ್ ಬೀರಮಂಗಲ, ಜಯಪ್ರಕಾಶ್ ಪ್ರಭು, ಶ್ರೀಮತಿ ಉಷಾ ರಾಮ್ ಭಟ್ ಪಟ್ವರ್ದನ್, ಶೇಷಪ್ಪ ನಾಯ್ಕ್ , ನಂದಕುಮಾರ್ ಪ್ರಭು ಉಪಸ್ಥಿತರಿದ್ದರು.