Ad Widget

ಜಟ್ಟಿಪಳ್ಳ : ಉಚಿತ ಯೋಗ ಶಿಬಿರ

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ಶ್ರೀ ಸ್ಕೂಲ್ ಆಫ್ ಯೋಗ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ವಾರದ ನಡೆಯುವ ಉಚಿತ ಯೋಗ ತರಬೇತಿಯ ಉದ್ಘಾಟನಾ ಸಮಾರಂಭವು ಏಪ್ರಿಲ್‍ನ 17 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಿರ್ದೇಶಕ ರಾಮಕೃಷ್ಣ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ರೇವತಿ ಗೋಪಾಲ ವಹಿಸಿದ್ದರು. ಯೋಗ ಪ್ರಶಿಕ್ಷಕರಾದ ಉಷಾ ಕೆ ಮತ್ತು ಅಕ್ಷತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸುಶೀಲಾ ಪ್ರಾರ್ಥಿಸಿದರು. ಮಹಿಳಾ ಮಂಡಲದ ಗೌರವಾಧ್ಯಕ್ಷೆ ಚಂದ್ರಾಕ್ಷಿ ಜೆ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಪೂರ್ವಾಧ್ಯಕ್ಷೆ ಜಯಂತಿ ಜೆ ರೈ ವಂದಿಸಿದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!