Ad Widget

ಏ.21 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏ.21 ಶುಕ್ರವಾರದಂದು ಪ್ರಕಟವಾಗಲಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9 ರಿಂದ 29 ರವರೆಗೆ ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.21 ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in/ ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದಾಗಿದೆ...

ಕರ್ನಾಟಕ ವಿಧಾನಸಭಾ ಚುನಾವಣೆ – ಸುಳ್ಯ ಕ್ಷೇತ್ರದಿಂದ 9 ಅಭ್ಯರ್ಥಿಗಳು

ಕರ್ನಾಟಕದ ವಿಧಾನಸಭೆಗೆ ಮೇ.10 ರಂದು ಚುನಾವಣೆ ನಡೆಯಲಿದ್ದು ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ಈ ಬಾರಿ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪಕ್ಷೇತರರು ಕಣದಲ್ಲಿದ್ದಾರೆ. ನಾಮಪತ್ರಗಳ ಪರಿಶೀಲನೆ ಏ.21 ರಂದು ನಡೆಯಲಿದ್ದು ಏ. 24 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ.ಇದೀಗ ಬಿಜೆಪಿ ಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ...
Ad Widget

ದಿ.ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭೇಟಿ

ಭಾಜಪಾ ಶಾಸಕ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಏ. 20ರಂದು ದಿ.ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಅವರ ತಂದೆ- ತಾಯಿಯ ಆಶೀರ್ವಾದ ಪಡೆದರು. ಈ ಹಿಂದೆ ಪಕ್ಷ ಮತ್ತು ಸರಕಾರ ನಿಮ್ಮ ನೋವಿನ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸ್ಪಂದನೆ ಮಾಡಿತ್ತೊ ಹಾಗೆಯೇ ನಾನು ಕೂಡ ನಿಮ್ಮ ಮನೆಯ ಮಗಳಾಗಿ ನಿಮ್ಮೊಂದಿಗೆ ಇದ್ದು ಎಲ್ಲಾ ರೀತಿಯ...

ಸಂಪತ್ ಕೊಲೆ ಪ್ರಕರಣದ ಮೂರನೇ ಆರೋಪಿಗೆ ಜಾಮೀನು

ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದ ಮೂರನೇ ಆರೋಪಿಗೆ ಮಂಗಳೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ‌ಜಾಮೀನು ನೀಡಿದೆ.2020 ರ ಅಕ್ಟೋಬರ್ 8 ರಂದು ಕಲ್ಲುಗುಂಡಿಯ ಸಂಪತ್ ಎಂಬವರು ಸುಳ್ಯ ಶಾಂತಿನಗರದ ಅವರ ಬಾಡಿಗೆ ಮನೆಯಿಂದ ಕಾರಿನಲ್ಲಿ‌ ಬರುತ್ತಿದ್ದಾಗ ಅವರನ್ನು ಅಡ್ಡ ಗಟ್ಟಿ, ಅಟ್ಟಾಡಿಸಿಕೊಂಡು‌ ಹೋಗಿ ಮನೆಯೊಂದರೊಳಗೆ ಕಡಿದು‌ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ...

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ಕಳ್ಳತನ

ಹರಿಹರ ಪಲ್ಲತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಯಿಂದ ಬ್ಯಾಟರಿ ಕಳ್ಳತನವಾಗಿರುವ ಘಟನೆ ವರದಿಯಾಗಿದೆ.ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ ಅವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಏ.15 ರಂದು ಶಾಲಾ ಕೊಠಡಿಗೆ ಬೀಗ ಹಾಕಿ ತೆರಳಿದ್ದು, ಏ.18 ರಂದು ಶಾಲೆಗೆ ಬಂದಾಗ ಕಂಪ್ಯೂಟರ್ ಕೊಠಡಿಯ ಬಾಗಿಲಿನ ಬೀಗ ಒಡೆದಿರುವುದು ಗಮನಕ್ಕೆ ಬಂದಿದ್ದು, ಕೊಠಡಿಯ...

ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್. ವೆಂಕಟೇಶ್ ನಾಮಪತ್ರ ಸಲ್ಲಿಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್ ಏ.19ರಂದು ನಾಮಪತ್ರ ಸಲ್ಲಿಸಿದರು. ರಥಬೀದಿಯಲ್ಲಿ ರುವ ಜೆಡಿಎಸ್ ಚುನಾವಣಾ ಕಚೇರಿ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಅಗ್ರಹಾರ ದುಗ್ಗಪ್ಪ, ಜೆಡಿಎಸ್...

ಅರಂತೋಡು : ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ರವರು ನಾಮಪತ್ರ ಸಲ್ಲಿಸಿದ ಬಳಿಕ ತಾಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಅರಂತೋಡು, ತೊಡಿಕಾನ ಭಾಗದಲ್ಲಿ ಏ.19 ರಂದು ಆ ಭಾಗದ ಕಾರ್ಯಕರ್ತರು ಹಾಗೂ ನಾಯಕರನ್ನು ಭೇಟಿ ಮಾಡಿ ಮತಯಾಚಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರುಗಳಾದ ಟಿ ಎಂ ಶಹೀದ್, ಸುಳ್ಯ ವಿಧಾನಸಭಾ...

ಐವರ್ನಾಡು : ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ರೂ.5500 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟಿಕೇರಿ ಎಂಬಲ್ಲಿ ಎ.17 ರಂದು ತ್ಯಾಜ್ಯ ಎಸೆದ ಮೂಡಬಿದ್ರೆ ನಿವಾಸಿಗಳಿಗೆ ರೂ 5500.00 ದಂಡ ವಿಧಿಸಿದ ಘಟನೆ ಎ.19 ರಂದು ನಡೆದಿದೆ. ಎ.17 ರಂದು ನಾಟಿಕೇರಿ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು...
error: Content is protected !!