

ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಏ.20 ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಪಡ್ಪಿನಂಗಡಿ(ಕಜ್ಜೋಡಿ ತುಪ್ಪದಮನೆ) ಸುಬ್ಬಪ್ಪ ಗೌಡ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಂಜೆ ವಿಷಯ ಬೆಳಕಿಗೆ ಬಂದಿದ್ದು, ಬೆಳ್ಳಾರೆ ಪೋಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರಿ ಹರಿಣಾಕ್ಷಿ ಹರೀಶ್, ಮೊಮ್ಮಗಳು ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು.