

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ಶ್ರೀ ಸ್ಕೂಲ್ ಆಫ್ ಯೋಗ ಮತ್ತು ಮಾನಸ ಮಹಿಳಾ ಮಂಡಲ(ರಿ) ಜಟ್ಟಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ವಾರದ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಮತ್ತು ಮಹಿಳಾ ದಿನಾಚರಣೆಯು ಏ. 25 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರಶಿಕ್ಷಕಿ ಅಕ್ಷತಾ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಹಿಳಾ ಮಂಡಳದ ಅಧ್ಯಕ್ಷೆ ರೇವತಿ ಗೋಪಾಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕರಾದ ರಾಮಕೃಷ್ಣ ಭಟ್ ಮತ್ತು ಉಷಾ ಕೆ ಮತ್ತು ಮಹಿಳಾ ಮಂಡಲದ ಗೌರವ ಸಲಹೆಗಾರ ರಘುನಾಥ ಜಟ್ಟಿಪಳ್ಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕರಿಗೆ ಮಹಿಳಾ ಮಂಡಲದ ವತಿಯಿಂದ ಗೌರವಿಸಲಾಯಿತು. ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು. ಜಯಂತಿ ಜೆ ರೈ ಪ್ರಾರ್ಥಿಸಿ, ಸವಿತಾ ಲಕ್ಷ್ಮಣ ಸ್ವಾಗತಿಸಿ, ಮಹಿಳಾ ಮಂಡಲದ ಗೌರವಾಧ್ಯಕ್ಷೆ ಚಂದ್ರಾಕ್ಷಿ ಜೆ ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶೈಲಜಾ ಪಿ ಶೆಟ್ಟಿ ವಂದಿಸಿದರು.