Ad Widget

ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸುಳ್ಯಕ್ಕೆ – ಭಾಗೀರಥಿ ಮುರುಳ್ಯ ಪರ ಭರ್ಜರಿ ಪ್ರಚಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹೇಳಿದ್ದಾರೆ.
ಎ. 30 ರ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸುಳ್ಯದ ಕೊಡಿಯಾಲಬೈಲು ಎಂಜಿಎಂ ಶಾಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಕಾರಿನಲ್ಲಿ ಬೆಳ್ಳಾರೆ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದು, 4.30 ಕ್ಕೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭ 8 ರಿಂದ 10 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಈಗಾಗಲೇ ಸುಳ್ಯದಲ್ಲಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ 231 ಬೂತ್ ಗಳಲ್ಲಿಯೂ ಮನೆ ಭೇಟಿ ಕಾರ್ಯಕ್ರಮ ಆಗಿದೆ. ಪ್ರತೀ ಕಡೆಯಲ್ಲಿಯೂ ಬಿಜೆಪಿಯನ್ನು ಜನ ಬೆಂಬಲಿಸುತ್ತಿದ್ದಾರೆ. ಈ ಬಾರಿ 35 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ.ಮುಂದೆ 2 ಹಂತದಲ್ಲಿ ಮನೆ ಭೇಟಿ ನಡೆಯಲಿದ್ದು ರಾಜ್ಯ ಮತ್ತು ಕೇಂದ್ರ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು ಎಂದು ಹೇಳಿದರು. ಮೇ.5 ರಂದು ಸುಳ್ಯಕ್ಕೆ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು. ಪುತ್ತೂರಿನಲ್ಲಿ ಬಿ ಜೆ ಪಿ ಗೆ ಬಂಡಾಯವಾಗಿ ಅರುಣ್ ಪುತ್ತಿಲ ಸ್ಪರ್ದೆಯಿಂದ ಸುಳ್ಯದಲ್ಲಿ ಯಾವುದೇ ಗೊಂದಲವಿಲ್ಲ, ಬಿಜೆಪಿ ಗೆಲುವಿಗೆ ಇಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಮುಖಕರಾದ ಎಸ್.ಎನ್. ಮನ್ಮಥ, ಜಯಪ್ರಕಾಶ್ ಕುಂಚಡ್ಕ, ಹರೀಶ್ ಬೂಡುಪನ್ನೆ, ಅಶೋಕ್ ಅಡ್ಕಾರ್, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!