Ad Widget

ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಎ.30ರಂದು ಸಂಜೆ ಭೇಟಿ ನೀಡಿದರು.
ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ , ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಅಭ್ಯರ್ಥಿ ಭಾಗೀರಥಿ ಮುರುಳ್ಯ, ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!