Ad Widget

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸರಕಾರದಿಂದ ವಿಶೇಷ ಪ್ಯಾಕೇಜ್: ಟಿ.ಎಂ.ಶಹೀದ್

ಈ ಬಾರಿಯ ವಿಧಾನಸಭಾ ಚುನಾವಣೆಯಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್‌ರವರು ಮೆ.೧ರಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ರೂ.20 ಕೋಟಿ ಅನುದಾನದಲ್ಲಿ ಅರಂತೋಡು – ತೊಡಿಕಾನದ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ ಅವರು
ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟು ಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ನತ್ತ ಒಲವು ತೋರಿಸಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆ ಮನೆ ಭೇಟಿ ಮಾಡಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಉತ್ತಮ ಪ್ರತಿಕ್ರಿಯೆ ಇದೆ. ಸುಳ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.
ಗ್ರಾಮ ಪಂಚಾಯತ್‌ನಿಂದ ಹಿಡಿದು ಕೇಂದ್ರದವರೆಗೆ ಬಿಜೆಪಿ ಅಧಿಕಾರದಲ್ಲಿದ್ದರೂ ಗ್ರಾಮೀಣ ರಸ್ತೆಗಳು ಇನ್ನೂ ಅಭಿವೃದ್ಧಿಗೊಂಡಿಲ್ಲ. ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ. ಜನರು ಕಾಂಗ್ರೆಸ್ ಘೋಷಣೆಗಳನ್ನು ಒಪ್ಪಿಕೊಂಡಿದ್ದಾರೆ. ನಮ್ಮದು ಭರವಸೆ ಅಲ್ಲ. ಗ್ಯಾರಂಟಿಗಳು. 2013ರಲ್ಲಿ ಸಿದ್ಧರಾಮಯ್ಯರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ 165 ಭರವಸೆಗಳಲ್ಲಿ 158 ಕೆಲಸ ಕಾರ್ಯಗಳನ್ನು ಈಡೇರಿಸಿದ್ದೇವೆ. ಈ ಬಾರಿಯೂ ಅದೇ ರೀತಿ ಕೆಲಸ ಆಗಲಿದೆ. ಮೊದಲ ಕ್ಯಾಬಿನೆಟ್‌ನಲ್ಲೇ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗುತ್ತದೆ. ಆ ಪ್ರಕಾರ ಈ ಜೂನ್ ತಿಂಗಳಿಂದ ಕಾಂಗ್ರೆಸ್ ಘೋಷಣೆ ಜನರಿಗೆ ತಲುಪುತ್ತದೆ ಎಂದು ಶಹೀದ್ ಹೇಳಿದರು.
ಅರಂತೋಡು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಹಲವು ಮಂದಿ ಹೇಳುತ್ತಿದ್ದಾರೆ. ಆದ್ದರಿಂದ ಅಭಿವೃದ್ಧಿಗಾಗಿ ಬದಲಾವಣೆ ಹೇಳುತ್ತಿದ್ದಾರೆ. ನಮ್ಮ ಶಾಸಕರು ಇಲ್ಲಿ ಆಯ್ಕೆಯಾದರೆ ವಿಶೇಷ ಪ್ಯಾಕೇಜ್ ತರುತ್ತೇವೆ. ಕಾಂಗ್ರೆಸ್‌ನ ಎಲ್ಲ ನಾಯಕರ ಸಹಕಾರದಿಂದ ಅರಂತೋಡು – ತೊಡಿಕಾನ ರಸ್ತೆಯನ್ನು 20 ಕೋಟಿ ರೂ ಅನುದಾನದಲ್ಲಿ ಅಭಿವೃದ್ಧಿ ಮಾಡುತ್ತೇವೆ. ಇದಕ್ಕೆ ನಾನೇ ಗ್ಯಾರಂಟಿ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಬ್ಬಗಳಿಗೆ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ಅದರಲ್ಲಿ ಅಲ್ಪಸಂಖ್ಯಾತ ರ ಹಬ್ಬಗಳನ್ನು ಬಿಡಲಾಗಿದೆ. ಈ ರೀತಿಯ ತಾರತಮ್ಯ ಸರಿಯಲ್ಲ. ಎಲ್ಲರನ್ನೂ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಮುಸ್ತಫಾ ಮಾತನಾಡಿ ಎಐಸಿಸಿ ಅಧ್ಯಕ್ಷರು ಸುಳ್ಯಕ್ಕೆ ಬಂದು ಹೋದ ಬಳಿಕ ಹೊಸ ಸಂಚಲನ ಸೃಷ್ಟಿಯಾಗಿದೆ. ಸುಳ್ಯದ ಅಡಿಕೆ ಎಲೆ ಹಳದಿ ರೋಗ, ತಮಿಳು ಪುನರ್ವಸತಿ ದಾರರ ಬೇಡಿಕೆ, ವಿದ್ಯುತ್ ಸಹಿತ ಎಲ್ಲ ಸಮಸ್ಯೆ ಯನ್ನು ಅವರು ಅರಿತಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ತಕ್ಷಣ ವಿಶೇಷ ಪ್ಯಾಕೇಜ್ ತರಲಾಗುವುದು ಎಂದು ಹೇಳಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!