

ನಡುಗಲ್ಲು ಬೂತ್ ನಲ್ಲಿ ಮೇ.06 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ ಪ್ರಮುಖ ನಾಯಕರು ಬೆಳಿಗ್ಗೆ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಂತರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
80 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹಾಗೂ ಮಾತೆಯರು ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಒಂದೇ ದಿನದಲ್ಲಿ ಸುಮಾರು 300 ಮನೆಗಳಿಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು.