ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಸುಳ್ಯ ಭಾಗದಲ್ಲಿ ನಡೆದ ಅಭಿವೃದ್ಧಿಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸುಳ್ಯ ಸೇರಿದಂತೆ ಜಿಲ್ಲೆಯ ೮ ಸ್ಥಾನಗಳು ಕೂಡಾ ಬಿಜೆಪಿ ವಶವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಮೇ.8ರಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಕ್ಷೇತ್ರದಲ್ಲಿ ಈಗಾಗಲೇ ಎರಡೆರಡು ಬಾರಿ ಬಿಜೆಪಿ ಮನೆ ಮನೆ ಅಭಿಯಾನ ನಡೆಸಿ ಪ್ರಚಾರ ಕಾರ್ಯ ಮಾಡಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಮಾಡಿರುವ ಜನಪರ ಯೋಜನೆಗಳು, ರೈತರ ಕಲ್ಯಾಣ ಕಾರ್ಯಕ್ರಮಗಳು ಜನರ ಮನ ಮುಟ್ಟಿದೆ. ಆದ್ದರಿಂದ ಈಗಾಗಲೇ ಮತದಾರ ಬಿಜೆಪಿಯನ್ನು ಗೆಲ್ಲಿಸಲು ನಿಶ್ಚಯ ಮಾಡಿರುವುದು ವರದಿ ನಮಗೆ ಬಂದಿದೆ. ಕರಾವಳಿ ಭಾಗದ 19 ಸ್ಥಾನಗಳನ್ನು ನಾವು ಗೆಲ್ಲುವುದರ ಮೂಲಕ ರಾಜ್ಯದಲ್ಲಿ 125 ರಿಂದ 130 ಸ್ಥಾನ ಗೆದ್ದು ಬಹುಮತದ ಸರಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿಕೊಂಡಿದೆ. ಅದು ಜನರಿಗೆ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದು ಇದೆಲ್ಲಾ ನಂಬಲು ಸಾಧ್ಯವೇ ಇಲ್ಲ ಎಂದು ಜನರೇ ಆಡುತ್ತಿದ್ದಾರೆ. ಚುನಾವಣೆ ಎಂದರೆ ಅದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನಡೆಯುತ್ತದೆ ಎಂಬ ದಿನಗಳಿದ್ದವು. ಆದರೆ ಈಗ ಬದಲಾಗಿ ಧರ್ಮ ಭಕ್ತರು ಮತ್ತು ಟಿಪ್ಪು ಭಕ್ತರ ನಡುವೆ ಚುನಾವಣೆ ನಡೆಯುತ್ತಿದೆಯೇನೋ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ಆ ರೀತಿಯಲ್ಲಿ ತನ್ನ ಪ್ರಣಾಳಿಕೆ ಮಾಡಿದೆ ಎಂದು ಅವರು ಹೇಳಿದರು.
ಕರಾವಳಿ ಭಾಗದ ಜನರಿಗೆ ಕುಚ್ಚಲಕ್ಕಿ ನೀಡಬೇಕೆಂಬ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡಿದೆವು. ಅನುಮೋದನೆಯೂ ಸಿಕ್ಕಿತ್ತು. ಆದರೆ ಆಡಳಿತಾತ್ಮಕ ಕಾರಣದಿಂದ ಈ ಬಾರಿ ನೀಡಲು ಆಗಿಲ್ಲ. ಮುಂದಿನ ದಿನದಲ್ಲಿ ನಮ್ಮ ಸರಕಾರ ಬಂದ ಕೂಡಲೇ ನಾವು ಕುಚ್ಚಲಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಅವರು ಹೇಳಿದರು.
ಬಿಜೆಪಿ ಮಾಡಿದ ಅಭಿವೃದ್ಧಿಯನ್ನು ಕಾಂಗ್ರೆಸ್ ಯಾವತ್ತೂ ಹೇಳುವುದುಲ್ಲ. ಅವರು ಅಪಪ್ರಚಾರ ಮಾಡುತ್ತಾರೆ ಅಷ್ಟೇ. ಈ ಭಾಗದಲ್ಲಿ ಶಾಸಕರಾಗಿ ಅಂಗಾರರು ದೊಡ್ಡ ಮಟ್ಟದ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ಸಚಿವರು ಹೇಳಿದರು.
ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪ್ರಮುಖರಾದ ಎಸ್.ಎನ್. ಮನ್ಮಥ, ಎನ್.ಎ.ರಾಮಚಂದ್ರ, ಶ್ಯಾಮ್ ಪಾನತ್ತಿಲ, ಶೀನಪ್ಪ ಬಯಂಬು, ಸೀತಾರಾಮ ಕೊಲ್ಲರಮೂಲೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.
- Thursday
- November 21st, 2024