- Tuesday
- May 20th, 2025

ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಮಾತನಾಡಿದ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮರವರು ಸುಳ್ಯ ಬಿಜೆಪಿಯ ಭದ್ರಕೋಟೆಯೆಂದು ಸುಳ್ಯದ ಮತದಾರರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕಳೆದ ಬಾರಿಯ ಅಂತರದಿಂದ 5 ಸಾವಿರ ಹೆಚ್ಚು ಅಂತರದಿಂದ ಭಾಗೀರಥಿ...

ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಮುಸಲ್ಮಾನರ ಪವಿತ್ರ ತೀರ್ಥ ಯಾತ್ರೆಯಾದ ಹಜ್ ವ್ಯವಸ್ಥೆಯನ್ನು ಬದಲಿಸಿ ಕೇರಳದ ಕಣ್ಣೂರಿಗೆ ನೀಡಿರುವುದು ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಟಿ.ಎಂ. ಶಹೀದ್ ಹೇಳಿದ್ದಾರೆ. ಮೇ.12ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮುಸಲ್ಮಾನರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಾ ಬರುತ್ತಿದೆ. ಹಲವಾರು ವರ್ಷಗಳಿಂದ ಇದ್ದ ಹಜ್ ಯಾತ್ರಿಕರಿಗೆ...

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮರ್ಕಂಜದ ನಿವಾಸಿ ಕುಸುಮಾಧರ ಮುಂಡೋಡಿ ಎಂಬವರ ಮೃತದೇಹ ಅರಂತೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಸುಮಾಧರರು ಅರಂತೋಡಿನಲ್ಲಿ ವಾಸವಾಗಿದ್ದು, ಎರಡು ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಇಂದು ಅವರು ವಾಸವಿದ್ದ ಮನೆಯ ಪಕ್ಕದ ತೋಟದಲ್ಲಿ ಕೊಕ್ಕೋ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ...