Ad Widget

ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ – ಲೋಕಸಭಾ ಚುನಾವಣೆಗೆ ಸಜ್ಜಾಗಲು ಪ್ರತಾಪ್ ಸಿಂಹ ನಾಯಕ್ ಕರೆ

ಸುಳ್ಯದಲ್ಲಿ ಭಾರಿ ಬಹುಮತದಿಂದ ಗೆಲುವು ತಂದುಕೊಟ್ಟ ಬಿಜೆಪಿ ಕಾರ್ಯಕರ್ತರಿಗೆ ಸುಳ್ಯದ ಬಂಟರ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಇನ್ನು ನಾವು ಸುಮ್ಮನೆ ಕುಳಿತುಕೊಳ್ಳದೇ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಶ್ರಮಿಸಬೇಕಾಗಿದೆ ಎಂದರು.

. . . . . . . . .

ನಮಗಾದ ಹಿನ್ನಡೆಯ ಕುರಿತು ವಿಮರ್ಶೆ ಮಾಡಿಕೊಂಡು ಆತ್ಮಾವಲೋಕನ ಮಾಡುತ್ತೇವೆ. ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯೋಣ ಎಂದು ಅವರು ಕಾರ್ಯಕರ್ತರಿಗೆ ಹೇಳಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ಮಾತನಾಡಿ ಅಂಗಾರರ ಅಭಿವೃದ್ಧಿ ಕಾರ್ಯ,ಕಾರ್ಯಕರ್ತರ ಶ್ರಮ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು.ಶಾಸಕಿ ಭಾಗೀರಥಿ ಮುರುಳ್ಯರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು ಇದು ನನ್ನ ಗೆಲುವಲ್ಲ ಕಾರ್ಯಕರ್ತರ ಗೆಲುವು ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ,ಎಲ್ಲರೂ ಸಹಕಾರ ನೀಡಬೇಕು ನನ್ನಿಂದ ತಪ್ಪುಗಳಾದರೆ ನನಗೇ ತಿಳಿಸಿ ತಿದ್ದಿಕೊಂಡು ಮುನ್ನಡೆಯುತ್ತೇನೆ ಎಂದು ಹೇಳಿದರು.ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀಮತಿ ಆಶಾ ತಿಮ್ಮಪ್ಪ ಗೌಡರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶಾಸಕಿ ಭಾಗಿರಥಿ ಮುರುಳ್ಯರನ್ನು ಸನ್ಮಾನಿಸಲಾಯಿತು. ಸಭೆಯ ಕೊನೆಯಲ್ಲಿ ಕಾರ್ಯಕರ್ತರಿಂದ ಭಾಗೀರಥಿಯವರಿಗೆ ಗೌರವ ನಡೆಯಿತು.ವೇದಿಕೆಯಲ್ಲಿ ಪುತ್ತೂರು ಮಾಜಿ ಶಾಸಕ ಮಠಂದೂರು, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಪಿ, ಬಿಜೆಪಿ ಜಿಲ್ಲಾ ಘಟಕರ ರಾಮದಾಸ್ ಬಂಟ್ವಾಳ್, ಕಸ್ತೂರಿ ಪಂಜ,ಬೂಡಿಯಾರ್ ರಾಧಾಕೃಷ್ಣ ರೈ, ಸುಳ್ಯ ಮಂಡಲ ಮಾಜಿ ಅಧ್ಯಕ್ಷರುಗಳಾದ ಎಸ್.ಎನ್.ಮನ್ಮಥ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಬ್ಬರ್ ಬೋರ್ಡ್ ನಿರ್ದೇಶಕ ಮುಳಿಯ ಕೇಶವ ಭಟ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್ ವೇದಿಕೆಯಲ್ಲಿದ್ದರು.ಸುಳ್ಯ ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ವಂದೇ ಮಾತರಂ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading