ನಾಲ್ಕೂರು ಗ್ರಾಮದ ವಾಸುದೇವ ಗೌಡ ಚಾರ್ಮತ ಎಂಬವರು ಗುತ್ತಿಗಾರಿಗೆ ಬಂದು ನಡುಗಲ್ಲಿಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.29 ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಳ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಿದ್ದಲ್ಲಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಉಸಿರಾಟ ಸರಿಯಾಗಿತ್ತು. ಪ್ರಜ್ಞೆ ಬಂದ ಮೇಲಷ್ಟೆ ತಲೆಯ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಅವರಿಗೆ 44 ವರ್ಷ ವಯಸ್ಸಾಗಿತ್ತು. ಇವರು ಜ್ಯೋತಿಷಿಯಾಗಿದ್ದರು.
- Thursday
- November 21st, 2024