Ad Widget

ವಳಲಂಬೆ : ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನೂತನ ಮುಖ್ಯಮಂತ್ರಿಯಾಗಿ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಗೆ ಬೆಂಕಿ ಹಾಕಿದ ಘಟನೆ ವಳಲಂಬೆಯಲ್ಲಿ ನಡೆದಿದೆ.ಮೇ.20 ರಂದು ವಳಲಂಬೆ ಹಾಗೂ ಪೈಕ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಅಂದೇ ರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ.‌ ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ...

♻️ಪ್ರಮಾಣ ವಚನ: ಸುಳ್ಯದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ♻️

ಸುಳ್ಯ:ಕರ್ನಾಟಕದಲ್ಲಿ ಕಾಂಗ್ರೆಸ್ ನೂತನ ಸರಕಾರ ರಚಿಸಿ, ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಮತ್ತಿತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸುಳ್ಯ ಬಸ್ ನಿಲ್ದಾಣದ ಬಳಿ ಸಂಭ್ರಮಾಚರಣೆ ಆಚರಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿ ಅಳವಡಿಸಲಾದ ಎಲ್‌ಸಿಡಿ ಪರದೆಯಲ್ಲಿ ಪ್ರಮಾಣವಚನದ ನೇರ ಪ್ರಸಾರವನ್ನು ವೀಕ್ಷಿಸಿದ ಕಾರ್ಯಕರ್ತರುಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ...
Ad Widget

ಕುಕ್ಕುಜಡ್ಕ: ತಂದೆ ಮಗನ ಹೊಡೆದಾಟ ತಂದೆ ಮೃತ್ಯು

ಅಮರ ಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದರು. ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ...

2,000 ರೂ. ನೋಟನ್ನು ಸ್ಥಗಿತಗೊಳಿಸಿದ ಆರ್ ಬಿಐ

2000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್...

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಶಾಸಕಿ ಭಾಗೀರಥಿ ಭೇಟಿ

ಸುಳ್ಯ: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೇ.19ರಂದು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ...

ಸಂಶುದ್ದೀನ್ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಗೋವಿಂದರಾಜನಗರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಕಳ್ಳತನ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಸಂಶಯಗೊಂಡ ಚಿನ್ನದಂಗಡಿಯವರು ಪೋಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ....

ಜಿ. ಪಂ. ಮಾಜಿ ಸದಸ್ಯ ನವೀನ್ ರೈ ಮೇನಾಲ ನದಿಯಲ್ಲಿ ಮುಳುಗಿ ದಾರುಣ ಸಾವು

ಸುಳ್ಯ: ಜಿ.ಪಂ.ಮಾಜಿ ಸದಸ್ಯ, ಬಿಜೆಪಿ ಮುಖಂಡ, ಅಜ್ಜಾವರ ಗ್ರಾಮದ ನವೀನ್ ಕುಮಾರ್ ರೈ ಮೇನಾಲ ಅವರು ಪಯಸ್ವಿನಿ ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಅವರ ಮನೆಯಿಂದ ಸುಮಾರು 3 ಕಿ.ಮೀ ದೂರದಲ್ಲಿ ತುದಿಯಡ್ಕ ಗಿರಿಜಾಶಂಕರ್ ಅವರ ಮನೆಯ ಬಳಿ ಪಯಸ್ವಿನಿ ನದಿಯ ಬದಿಯಲ್ಲಿ ಅವರ ತೋಟಕ್ಕೆ ನೀರು ಸರಬರಾಜುಮಾಡುವ ಪಂಪ್‌ ಇದ್ದು, ಅಲ್ಲಿಗೆ...

ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಧುರೀಣ ನವೀನ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಮೃತ್ಯು

ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ರೈ ಮೇನಾಲರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ಮೃತದೇಹವನ್ನು ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.

ಠೇವಣಿ ಇರಿಸಿದ್ದ ಕೋವಿ, ಬಂದೂಕುಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿಗಳಿಂದ ಆದೇಶ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆಯುಧಗಳನ್ನು ಠೇವಣಿ ಇರಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗಿದ್ದು, ಠೇವಣಿ ಇರಿಸಿದ್ದ ಕೋವಿ, ಬಂಧೂಕುಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿಗಳಿಂದ ಆದೇಶ ಬಂದಿದೆ. ಮೇ.15ರ ವರೆಗೆ ನೀತಿ ಸಂಹಿತೆ ಜಾರಿಗೊಂಡಿದ್ದ ಕಾರಣ, ಮೇ.15ರಿಂದ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ, ಅಧಿಕೃತ...

ಲೇಖನ : ನಿರೀಕ್ಷೆಗಳ ಜೊತೆಗೆ ಅನಿರೀಕ್ಷಿತ ಪಯಣ ಈ ಬದುಕು…

ಜೀವನದಲ್ಲಿ ಪ್ರತಿಯೊಬ್ಬರಿಗೂ ಕೆಲವೊಂದು ನಿರೀಕ್ಷೆಗಳಿರುತ್ತವೆ. ಕೆಲವರಿಗೆ “ನಾನು ಇವತ್ತು ಚೆನ್ನಾಗಿ ಓದಿದ್ರೆ ನಾಳೆ ನಂಗೆ ಒಳ್ಳೆಯ ಕೆಲಸ ಸಿಗುತ್ತೆ” ಅನ್ನೋ ನಿರೀಕ್ಷೆ, ಇನ್ನೂ ಕೆಲವರಿಗೆ “ನಾನು ಜೀವನದಲ್ಲಿ ಏನೋ ಒಂದು ಸಾಧನೆ ಮಾಡೋದಕ್ಕೆ ಹೊರ್ಟಿದ್ದೀನಿ, ನಂಗೆ ಯಶಸ್ಸು ಸಿಕ್ಕೇ ಸಿಗುತ್ತೆ” ಅನ್ನೋ ನಿರೀಕ್ಷೆ. ಹೀಗೆ ಪ್ರತಿಯೊಬ್ಬರಿಗೂ ಅವರದ್ದೇ ಅದ ನಿರೀಕ್ಷೆಗಳಿರುತ್ತವೆ. ನಿರೀಕ್ಷೆ ಅನ್ನೋದಕ್ಕಿಂತ ನಂಬಿಕೆ ಎನ್ನಬಹುದು....
Loading posts...

All posts loaded

No more posts

error: Content is protected !!