
ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು, ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಸಹಕಾರದಿಂದ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರೆಂದು ಎಂದು ತಿಳಿದು ಬಂದಿದೆ.