ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವುಗಳ ಆಶ್ರಯದಲ್ಲಿ ಜೂ.14 ರಂದು ಅಪರಾಹ್ನ 2:00 ರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ, ಸಮಾಜಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಹಾಗೂ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸುಳ್ಯ ತಾಲೂಕು ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಪ್ರಾಂಶುಪಾಲರಾದ ಡಾ| ಸತೀಶ್ ಕುಮಾರ್.ಕೆ.ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಸಭಾಪತಿಗಳಾದ ಪಿ.ಬಿ ಸುಧಾಕರ ರೈ ಅವರು ಅಭಿನಂದನಾ ಭಾಷಣ ಮಾಡಲಿದ್ದು, ತಹಶೀಲ್ದಾರರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಅಧ್ಯಕ್ಷರಾದ ಜಿ.ಮಂಜುನಾಥ ಅವರು ಅಭಿನಂದಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಉಪ ಸಭಾಪತಿಗಳಾದ ಕೆ.ಎಂ ಮುಸ್ತಫಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಪ್ರತಿನಿಧಿ ಸಿ.ಎ ಗಣೇಶ್ ಭಟ್.ಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಖಜಾಂಜಿಗಳಾದ ಕೆ.ವಿನಯ ಕುಮಾರ್ ಇವರುಗಳು ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ರಕ್ತದಾನ ಹಾಗೂ ಸಮಾಜ ಸೇವೆಗಾಗಿ ಲಯನ್ಸ್ ಕ್ಲಬ್ ಹಿರಿಯಡ್ಕ ಉಡುಪಿ ಜಿಲ್ಲೆ, ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಯೂತ್ ರೆಡ್ ಕ್ರಾಸ್ ಸ.ಪ್ರ.ದ ಕಾಲೇಜು ಸುಳ್ಯ, ಯೂತ್ ರೆಡ್ ಕ್ರಾಸ್ ಎನ್.ಎಂ.ಸಿ ಸುಳ್ಯ, ಮಂಜುಶ್ರೀ ಗೆಳೆಯರ ಬಳಗ ಐವರ್ನಾಡು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ.ಕ್ಷೇ.ಧ.ಗ್ರಾ.ಯೋಜನೆ(ರಿ.) ಸಂಪಾಜೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ.ಕ್ಷೇ.ಧ.ಗ್ರಾ.ಯೋಜನೆ(ರಿ.) ಸುಬ್ರಹ್ಮಣ್ಯ ವಲಯ, ಯುವತೇಜಸ್ಸು ಟ್ರಸ್ಟ್(ರಿ.), ಕಾರುಣ್ಯ ಚಾರಿಟೇಬಲ್ ಟ್ರಸ್ಟ್(ರಿ.) ಪೈಚಾರು ಸುಳ್ಯ, ಮಾಜಿ ಸೈನಿಕರ ಸಂಘ ಸುಳ್ಯ ತಾಲೂಕು, ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಸಂಸ್ಥೆಗಳಿಗೆ ಸನ್ಮಾನ ನಡೆಯಲಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)
- Saturday
- November 23rd, 2024