ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಸಬಹುದು.ಗ್ರಾಮ ಪಂಚಾಯತ್, ನಾಡ ಕಚೇರಿ, ಎಲ್ಲಾ ವಿದ್ಯುತ್ ಕಚೇರಿಗಳಲ್ಲಿಯೂ ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳಬಹುದು.
- Thursday
- November 21st, 2024