Ad Widget

ನಾಲ್ಕೂರು :- ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ತಂಡ ನಾಲ್ಕೂರು, ಶಾಲಾಭಿವೃದ್ಧಿ ಸಮಿತಿ ನಡುಗಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು....

ದೇವರಕೊಲ್ಲಿ : ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ  ಭೀಕರ ಅಪಘಾತ – ಓರ್ವ ಮೃತ್ಯು

ದೇವರಕೊಲ್ಲಿ ಬಳಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ ಇಂದು ರಾತ್ರಿ  ಭೀಕರ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಕಾರಿನಲ್ಲಿದ್ದ ಒರ್ವ ಮೃತಪಟ್ಟ ಘಟನೆ ನಡೆದಿದೆ. ಗಾಯಾಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದರೆನ್ನಲಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು...
Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಶ್ವನಾಥ ನಡುತೋಟ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯೋಗದ ಮಹತ್ವದ  ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಯೋಗ ಪ್ರದರ್ಶನಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್...

ಗುತ್ತಿಗಾರು : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಿಬಿಸಿ ಕಾರ್ಯಾಧ್ಯಕ್ಷರಾದ ಗಿರೀಶ್ ಮಾವಾಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರ ಹಾಗೂ ಪ್ರೌಢಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮ...

ಸುಬ್ರಹ್ಮಣ್ಯ : ವೈದ್ಯಾಧಿಕಾರಿ ಡಾ.ತ್ರಿಮೂರ್ತಿಯವರಿಗೆ ಕಾಯಕ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು  ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ...

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು. ನಲ್ಲಿ 1100 ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಯೋಗಾಸನ ; ಚಿತ್ತ ಚಾಂಚಲ್ಯ ಹೋಗಲಾಡಿಸಿ  ಏಕಾಗ್ರತೆ ಸಾಧಿಸಲು ಯೋಗ ಅಡಿಗಲ್ಲು- ಸೋಮಶೇಖರ ನಾಯಕ್ ಅಭಿಮತ

ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ.  ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ  ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ವಿಶ್ವ ಇದನ್ನು ಅನುಸರಿಸುತ್ತಿದೆ.ದೇವತೆಯ ಆರಾಧನೆಗೆ ಯೋಗಾಸನವನ್ನು ಬಳಸಲಾಗುತ್ತದೆ. ಸೂರ್ಯನ ಪೂಜನೆಮಾಡುವ  ಸೂರ್ಯ ನಮಸ್ಕಾರ ಅತ್ಯಂತ ಶ್ರೇಷ್ಠವಾದ ಆಸನವಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಇದೀಗ ವಿಶ್ವಾದ್ಯಂತ ಯೋಗದ...

ಜೂ.23; ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ

ಸುಳ್ಯ ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಜೂ. 23 ರಂದು ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಅಂಚೆ ಇಲಾಖೆಯ ಯೋಜನೆಗಳಾದ ಪಿಎಲ್‌ಐ, ಆರ್ ಪಿ ಎಲ್ ಐ, ಬಜಾಜ್ ಆಕ್ಸಿಡೆಂಟ್ ಇನ್ಸೂರೆನ್ಸ್ ಪಾಲಿಸಿಗಳು, ಮಹಿಳಾ ಸಮ್ಮಾನ್ ಐಪಿಪಿಬಿ ಖಾತೆಗಳನ್ನು ತೆರೆಯುವ ಸೇವೆಯೂ ಲಭ್ಯವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ...

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿಜೂ 21ರಂದು 9ನೇ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಗೂನಡ್ಕದಲ್ಲಿ ಆಚರಿಸಲಾಯಿತು. ಈ ದಿನದ ಮಹತ್ವದ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ.ಡಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು...

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗ ದಿನಾಚರಣೆ ; ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ- ಡಾ. ಶಶಿಧರ್ ಹಾಸನಡ್ಕ

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ 21.ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ‘ ಆರೋಗ್ಯಕ್ಕಾಗಿ ಯೋಗ ’ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.   ವೈದ್ಯರು ಮತ್ತು ಯೋಗ ಪರಿಣಿತರಾದ ಡಾ. ಶಶಿಧರ್ ಹಾಸನಡ್ಕ ಇವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ‘ಯೋಗ ಮತ್ತು ಧ್ಯಾನದ ಉಪಯೋಗಗಳು’ ಎಂಬ ವಿಷಯದ ಬಗ್ಗೆ ವಿವರಿಸಿದ ಡಾ. ಶಶಿಧರ್ ಹಾಸನಡ್ಕ ಹಲವಾರು ಮಾಹಿತಿಗಳನ್ನು...

ಯೋಗದಿಂದ ರೋಗ ದೂರವಾಗುತ್ತದೆ – ಡಾ. ಚೂಂತಾರು

ದಿನವಿಡೀ ನಿಂತುಕೊಂಡು 8 ರಂದ 12 ಗಂಟೆಯ ಕಾಲ ಕೆಲಸ ಮಾಡುವ ಗೃಹರಕ್ಷಕರಿಗೆ ದೈಹಿಕ ಆರೋಗ್ಯ ಅತೀ ಅಗತ್ಯ. ಟ್ರಾಫಿಕ್ ನಿಯಂತ್ರಣ, ನೆರೆ ನಿಯಂತ್ರಣ ಮತ್ತು ಬೆಂಕಿ ಅವಘಡ ಮುಂತಾದ ಒತ್ತಡದ ಸಂದರ್ಭದಲ್ಲಿ ಕೆಲಸ ನಿರ್ವಹಿಸುವಾಗ ಗೃಹರಕ್ಷಕರಿಗೆ ವಿಪರೀತ ಮಾನಸಿಕ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯಕ್ಕೆ...
Loading posts...

All posts loaded

No more posts

error: Content is protected !!