

ದೇವರಕೊಲ್ಲಿ ಬಳಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ ಇಂದು ರಾತ್ರಿ ಭೀಕರ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಕಾರಿನಲ್ಲಿದ್ದ ಒರ್ವ ಮೃತಪಟ್ಟ ಘಟನೆ ನಡೆದಿದೆ. ಗಾಯಾಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದರೆನ್ನಲಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಂಟೈನರ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.





