Ad Widget

ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ
ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ, ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 9ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಡಾ. ಚಿದಾನಂದ ಕೆ. ವಿ. ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

. . . . . . . . .

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಕೌನ್ಸಿಲ್ ಮೆಂಬರ್ ಜಗದೀಶ ಅಡ್ತಲೆ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಸಭಾ ಕಾರ್ಯಕ್ರಮದ ಬಳಿಕ ಗಣ್ಯ ಅತಿಥಿಗಳು, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ ವಿದ್ಯಾರ್ಥಿಗಳಿಂದ ತೆರೆದ ಮೈದಾನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಡಾ. ಅನುಷಾ ಯಂ., ಡಾ. ನಮೀತ ಶೆಟ್ಟಿ, ಡಾ. ಪೂಜಾ, ಹಾಗೂ ಮಿ. ಮಹಂತ್ ರಾಜ್ ಇವರು ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜಯವಾಣಿ ಯಂ. ಜಿ., ಡಾ. ಶಭೀನಾ ಟಿ. ಟಿ., ಇವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕೂಡ ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ನೆರವೇರಿಸಿದರು.
ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಡಾ. ದಿಲ್‌ಶಾನ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading