Ad Widget

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ಜೂ.27ರಂದು ನಿಧನ ಹೊಂದಿದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜೂ.28ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಶ್ರೀಯುತ ಜಯಂತ್ ಶೆಟ್ಟಿ ಅವರು 1999 ರಲ್ಲಿ ಸೇರಿ ಸುಮಾರು 24 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, 2008 ರಲ್ಲಿ ಇವರು ಘಟಕಾಧಿಕಾರಿಯಾಗಿ ಭಡ್ತಿಹೊಂದಿರುತ್ತಾರೆ, ಇವರಿಗೆ 2012ರಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಪದಕ ಲಭಿಸಿರುತ್ತದೆ. ಇವರು ಓರ್ವ ದಕ್ಷ, ಪ್ರಾಮಾಣಿಕ ಘಟಕಾಧಿಕಾರಿಯಾಗಿದ್ದು ಇವರ ಅವಧಿಯಲ್ಲಿ ಅನೇಕ ಬಂದೋಬಸ್ತ್ ಕರ್ತವ್ಯ, ಚುನಾವಣಾ ಕರ್ತವ್ಯಗಳನ್ನು ಮಾಡಿರುತ್ತಾರೆ ಹಾಗೂ ಗೃಹರಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ದೇವರು ಇವರ ಆತ್ಮಕ್ಕೆ ಶಾಂತಿ ಸಿಗಲೆಂದು, ಅವರ ಕುಟುಂಬಕ್ಕೆ ಈ ನೋವನ್ನು ಮರೆಯುವ ಶಕ್ತಿಯನ್ನು ಆ ದೇವರು ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣವೆಂದು ನುಡಿದರು ಹಾಗೂ ಉಪಸಮಾದೇಷ್ಟರಾದ ಶ್ರೀ ರಮೇಶ್ ಅವರು ಮಾತನಾಡಿ ನನ್ನ ಸೇವಾ ಅವಧಿಯಲ್ಲಿ ಇವರ ಸೇವೆಯನ್ನು ಅನೇಕ ಬಾರಿ ಗುರುತಿಸಿದ್ದು ಇವರ ಸೇವೆಯು ನಮಗೆಲ್ಲ ಮಾದರಿ ಎಂದು ನುಡಿದರು. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಒಂದು ನಿಮಿಷ ಮೌನಾಚರಣೆಯನ್ನು ಆಚರಿಸಲಾಯಿತು. ಈ ಶ್ರಧ್ದಾಂಜಲಿ ಕಾರ್ಯಕ್ರಮದಲ್ಲಿ ಕಛೇರಿ ಅಧೀಕ್ಷಕಿ ಶ್ರೀಮತಿ ಕವಿತಾ ಕೆ.ಸಿ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ಮೀನಾಕ್ಷಿ, ಗೃಹರಕ್ಷಕರಾದ ಕನಕಪ್ಪ, ಪ್ರಸಾದ್, ನಿಖಿಲ್, ವಿಜಯೇಂದ್ರ, ಅರವಿಂದ್, ರಂಜಿತ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading