ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಿಸಲಾಗಿದೆ. ಸಾರ್ವಜನಿಕರು ಯಾರಾದರೂ ಆರೋಪಿಗಳ ಸುಳಿವು ನೀಡಿದಲ್ಲಿ ಅವರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಸುಳ್ಯದ ಕಲ್ಲುಮುಟ್ಲು ನಿವಾಸಿ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಯಲ್ಲೂ ಪ್ರಕಟಣೆ ಪ್ರತಿ ಲಗತ್ತಿಸಲಾಗಿದೆ ಎಂದು ತಿಳಿದು ಬಂದಿದೆ.
- Thursday
- November 21st, 2024