ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಜಂಟಿ ಅಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ತೆಕ್ಕಿಲ್ ಮಾದರಿ ಸಮೂಹ ಸಂಸ್ಥೆಯ ಶಾಲೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು.
ವಲಯ ಅರಣ್ಯ ಅಧಿಕಾರಿ ಮಂಜುನಾಥ್ ರವರು ವನಮಹೋತ್ಸವದ ಮಹತ್ವ ಹಾಗೂ ಪರಿಸರ ಜಾಗೃತಿ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಸೊಸೈಟಿ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸದಸ್ಯರುಗಳಾದ ಅಬುಸಾಲಿ, ಎಸ್. ಕೆ. ಹನೀಫ್, ವಿಮಲಾ ಪ್ರಸಾದ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಉನೈಸ್ ಪೆರಾಜೆ, ತಾಜ್ ಮಹಮ್ಮದ್, ರಹೀಮ್ ಬೀಜದಕಟ್ಟೆ, ಉಮ್ಮರ್ ಹಾಜಿ, ಹಾರೀಸ್ ಕೆ. ಎಸ್., ಸಾದಿಕ್ ಮಾಸ್ತರ್, ಜಯಾನಂದ ಸಂಪಾಜೆ, ಕಾಂತಿ ಬಿ.ಎಸ್, ನೇತ್ರಾವತಿ ಬಂಗ್ಲೆಗುಡ್ಡೆ ಉಮೇಶ್ ಕಣಪಿಲ ಹಾಗೂ ಶಾಲಾ ಶಿಕ್ಷಕ ವೃಂದ, ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು. ಶಿಕ್ಷಕಿ ಅನಿತಾ ಸ್ವಾಗತಿಸಿ, ಉಪ ಅರಣ್ಯಾಧಿಕಾರಿ ಚಂದ್ರು ವಂದಿಸಿದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.