ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.1 ರಂದು ಪೋಷಕರ ಸಭೆಯು ನಡೆಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಫಾ| ಪಾವ್ಲ್ ಕ್ರಾಸ್ತ ರವರು, ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಫೆರ್ನಾಂಡಿಸ್ ರವರು, ಶಿಕ್ಷಕ-ರಕ್ಷಕ ಕಾರ್ಯಕಾರಿ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರವರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಲೋಕ್ಯ ನಾಯ್ಕ ರವರು, ನಿಕಟ ಪೂರ್ವ ಮುಖ್ಯೋಪಾಧ್ಯಾಯನಿ ಶ್ರೀಮತಿ ವನಿತಾ.ಬಿ ರವರು, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜಾರವರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನಾ ನೃತ್ಯದ ಮೂಲಕ ಆರಂಭಗೊಂಡಿತು. ಶಾಲಾ ಶೈಕ್ಷಣಿಕ ಚಟುವಟಿಕೆಗಳ ವರದಿಯನ್ನು ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಫೆರ್ನಾಂಡಿಸ್ ರವರು ವಾಚಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಲೋಕ್ಯ ನಾಯ್ಕವರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ, ವಿದ್ಯಾರ್ಥಿಗಳ ಹಾಗೂ ಪೋಷಕರ ಪಾತ್ರ ಹೇಗಿರಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು.
ನಂತರ ತರಗತಿವಾರು ಪೋಷಕ ಪ್ರತಿನಿಧಿಗಳ ಆಯ್ಕೆ ನಡೆಯಿತು.
ಸಭಾಧ್ಯಕ್ಷತೆಯನ್ನು ವಹಿಸಿದ ವಂದನೀಯ ಫಾ| ಪಾವ್ಲ್ ಕ್ರಾಸ್ತ ರವರು ಶುಭ ಹಾರೈಸಿ ಮಾತನಾಡಿದರು. ಜೊತೆಗೆ ಸಂಪನ್ಮೂಲ ವ್ಯಕ್ತಿಗಳಾದ ಲೋಕ್ಯ ನಾಯ್ಕ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಸಹ ಶಿಕ್ಷಕಿ ಶ್ರೀಮತಿ ವನಿತರವರು ನೆರೆದಿರುವ ಎಲ್ಲರನ್ನು ಸ್ವಾಗತಿಸಿ, ಶ್ರೀಮತಿ ದಿವ್ಯಶ್ರೀರವರು ವಂದಿಸಿದರು. ಸಹ ಶಿಕ್ಷಕ ಪ್ರಜ್ವಲ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.