Ad Widget

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಎನ್ ಐ ಎ ಕೊಟ್ಟ ಗಡುವು ಅಂತ್ಯ- ಮುಂದಿನ ನಡೆ ಬಗ್ಗೆ ಕುತೂಹಲ

ಸುಳ್ಯ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಎನ್ ಐ ಎ ನ್ಯಾಯಾಲಯ ಸೂಚಿಸಿದ ಗಡುವು ಮುಗಿದಿದ್ದು, ತನಿಖಾ ಸಂಸ್ಥೆಯ ಮುಂದಿನ ನಡೆಯ ಬಗ್ಗೆ ಬಾರಿ ಕುತೂಹಲ ಮೂಡಿದೆ.

. . . . . .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಿ ಮನೆಗಳಲ್ಲಿ ನೋಟಿಸ್ ಅಂಟಿಸಲಾಗಿತ್ತು . ಜತೆಗೆ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿದ್ದಲ್ಲದೆ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಮಾತ್ರ ಶರಣಾಗಿಲ್ಲ.

ತಲೆಮರೆಸಿಕೊಂಡಿಕೊಂಡುವ ಆರೋಪಿಗಳ ಆಸ್ತಿ ಜಪ್ತಿ ಮಾಡಬಹುದು ಎನ್ನಲಾಗಿದ್ದರೂ ಇದಕ್ಕೂ ಸಮಯ ತಗಲುತ್ತದೆ ಎಂದು ಹೇಳಲಾಗುತ್ತಿದ್ದು, ಆರೋಪಿಯ ಹೆಸರಿನಲ್ಲಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಿ, ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಯಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಆ ಕುರಿತಾಗಿಯೂ ತನಿಖೆ ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್ ನಾಸಿರ್, ಅಬ್ದುಲ್ ರೆಹಮಾನ್ ಮತ್ತು ಬೆಳ್ತಂಗಡಿಯ ನೌಷಾದ್ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!