
ಮಡಿಕೇರಿ ವಿಭಾಗದ ಸಂಪಾಜೆ ಪ್ರಾದೇಶಿಕ ವಲಯದ ವತಿಯಿಂದ ಚೆಂಬು ಗ್ರಾಮದ ಕೂಡಡ್ಕ,ಹಿರಿಯ ಪ್ರಾಥಮಿಕ ಶಾಲೆ ಇವರ ಸಹಭಾಗಿತ್ವದಲ್ಲಿ, ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜು.4 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪರಿಸರದ ಮಹತ್ವದ ಬಗ್ಗೆ ತಿಳಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು, ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಮಧುಸೂದನ್. ಯಂ. ಕೆ, ಶಾಲೆ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಸದಸ್ಯರು , ವಿದ್ಯಾರ್ಥಿಗಳು, ಹಾಗೂ ಸಂಪಾಜೆ ವಲಯದ ಅರಣ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.