ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಗಣಪಯ್ಯ ಹೊಸೊಳಿಕೆ ರವರಿಗೆ ಬ್ರೈನ್ ಎಮರೇಜ್ ಆಗಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇವರ ಚಿಕಿತ್ಸಾ ವೆಚ್ಚಕ್ಕೆ ಹೆಚ್ಚಿನ ಹಣದ ಅವಶ್ಯಕತೆಯನ್ನು ಮನಗಂಡು ಕಿರಣರಂಗ ಅದ್ಯಯನ ಸಂಸ್ಥೆಯ ಅಧ್ಯಕ್ಷ ಯೋಗೀಶ್ ಹೊಸೊಳಿಕೆ ಹಾಗೂ ವಳಲಂಬೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪುರ್ಲುಮಕ್ಕಿ ಯವರು ದಾನಿಗಳಿಂದ ಸಂಗ್ರಹಿಸಿದ 35 ಸಾವಿರ ಹಣವನ್ನು ಗಣಪಯ್ಯ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೇಶವ ಹೊಸೊಳಿಕೆ ಉಪಸ್ಥಿತರಿದ್ದರು.
- Thursday
- November 21st, 2024