ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಜು.07 ರಿಂದ 10 ರವರೆಗೆ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ನಡೆಯುತ್ತಿದ್ದು, ಜು.07 ರಂದು ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

. . . . . . . . .


ಭಾರತೀಯ ರೆಡ್ ಕ್ರಾಸ್ ನ ಸುಳ್ಯ ತಾಲೂಕು ಸಭಾಪತಿ ಸುಧಾಕರ ರೈ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವವನ್ನು ವಿವರಿಸಿದರು.ಕಾಲೇಜು ಪ್ರಾಂಶುಪಾಲರಾದ ಸತೀಶ್ ಕುಮಾರ್.ಕೆ.ಆರ್ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ನಂತರ ವ್ಯಕ್ತಿತ್ವ ವಿಕಸನದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ| ಅನುರಾಧಾ ಕುರುಂಜಿ ಅವರು ಮಾಹಿತಿ ನೀಡಿದರು.
ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶೈಲಜಾ.ಎನ್.ಆರ್ ಈ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು.ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಧನರಾಜ್ ಕುಮಾರ್ ಬಿ.ಸಿ ಗೌರವ ಉಪಸ್ಥಿತರಾಗಿದ್ದರು.
ಜು.08 ರಂದು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಬಗ್ಗೆ ಮಾಹಿತಿ ಹಾಗೂ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಮಾಹಿತಿ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ವಿಧ್ಯಾಮಾತಾ ಆಕಾಡೆಮಿ ಪುತ್ತೂರಿನ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ವೈದ್ಯಾಧಿಕಾರಿಗಳಾದ ಡಾ| ವೀಣಾ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.

. . . . . . .

ಜು.09 ರಂದು ಭಾರತೀಯ ರಕ್ಷಣಾ ವಿಭಾಗದಲ್ಲಿ ಉದ್ಯೋಗವಕಾಶ ಹಾಗೂ ನಾಯಕತ್ವದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ನಿವೃತ್ತ ಸೇನಾಧಿಕಾರಿಗಳಾದ ಕ್ಯಾಪ್ಟನ್ ಸುದಾನಂದ ಹಾಗೂ ಸುಳ್ಯ ಸಿಟಿ ವಲಯ ತರಬೇತುದಾರರಾದ ಮನಮೋಹನ್.ಬಿ ಹಾಗೂ ತಂಡದವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.
ಜು.10 ರಂದು ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading