ಸರಕಾರಿ ಪ್ರೌಢ ಶಾಲೆ ಎಣ್ಮೂರು,
ಸುಂದರ ಪ್ರತಿಷ್ಠಾನ ಬೆಂಗಳೂರು ಹಾಗೂ ಅಭ್ಯುದಯ ಸಂಸ್ಥೆಯ ಮೂಲಕ ಎಣ್ಮೂರು ಪ್ರೌಢ ಶಾಲೆಯಲ್ಲಿ ಗ್ರಂಥಾಲಯ ಉನ್ನತೀಕರಣ ಹಾಗೂ ನೋಟು ಪುಸ್ತಕ ವಿತರಣಾ ಕಾರ್ಯಕ್ರಮ ಜುಲೈ 08 ರಂದು ನಡೆಯಿತು. ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. JC ಪೂರ್ವ ವಲಯಾಧಿಕಾರ ಜೇಸಿ ಪ್ರದೀಪ್ ಕುಮಾರ್ ರೈ ಪನ್ನೆಗುತ್ತು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿ ಜೀವನದಲ್ಲಿ ಜ್ಞಾನ ಮತ್ತು ಲೋಕ ಜ್ಞಾನವನ್ನು ಬೆಳೆಸಿಕೊಳ್ಳಬೇಕು, ಶಾಲೆಯಲ್ಲಿ ಕಲಿತ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಾಲೆ ಗುರುಗಳು ಮತ್ತು ಪೋಷಕರಿಗೆ ಗೌರವ ತಂದುಕೊಡಬೇಕು, ಸುಂದರ ಭಾರತ ಮತ್ತು ಅಭ್ಯುದಯ ಸಂಸ್ಥೆಯವರು ನೀಡಿದ ಗ್ರಂಥಾಲಯ ಮತ್ತು ನೋಟ್ ಪುಸ್ತಕಗಳ ಸದುಪಯೋಗಪಡಿಕೊಳ್ಳಿ, ನಿರಂತರ ಓದುವ ಹವ್ಯಾಸ ರೂಢಿಸಿಕೊಳ್ಳಿ ಪುಸ್ತಕಗಳೇ ನಮಗೆ ಉತ್ತಮ ಗೆಳೆಯರು ಎಂದು ಹಿತವಚನ ನುಡಿದರು.
ಈ ಸಂದರ್ಭದಲ್ಲಿ ದ್ವಿತೀಯ ಸೋಪಾನ ಪರೀಕ್ಷೆ ತೇರ್ಗಡೆಯಾದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಗೌಡ ಪೂದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಪ್ರಾಸ್ತಾವಿಕದೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ದಿವ್ಯಾ ಎಂ ಕೆ ಅತಿಥಿಗಳನ್ನು ಪರಿಚಯಿಸಿದವರು. ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ.ಕೆ ವಂದಿಸಿದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಉಷಾ.ಕೆ.ಎಸ್. ನಿರೂಪಿಸಿದರು.