Ad Widget

ಉಬರಡ್ಕ : ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

. . . . . . . . .

ಉಬರಡ್ಕದ ಕೃಷ್ಣನ್ ನಾಯರ್ ರವರ ತೋಟದಲ್ಲಿ “ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ”ಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮೀನು ಕೃಷಿಕರಿಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳು, ಇಲಾಖಾ ಸೌಲಭ್ಯಗಳು, ನೀರು ಮತ್ತು ಮಣ್ಣಿನ ಗುಣಮಟ್ಟದ ಕುರಿತು ಮಾಹಿತಿ ನೀಡಲಾಯಿತು. ಕೃಷ್ಣನ್ ನಾಯರ್ ರವರ ಸಮಗ್ರ ಮೀನು ಕೃಷಿ ಪದ್ಧತಿ ಬಗ್ಗೆ ಕ್ಷೇತ್ರ ಭೇಟಿಯನ್ನು ನಡೆಸಲಾಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಿತ್ರ ಕುಮಾರಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಶಾಂತ್ ಪಾಣತ್ತಿಲ, ಮಹಾಶೀರ್ ಮತ್ಯ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ,ಮಂಗಳೂರು ಮೀನುಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪದ್ಮನಾಭ ರವರು ಉಪಸ್ಥಿತರಿದ್ದರು. ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಂಜುಳಾಶ್ರೀ ಶೆಣೈ ರವರು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading