Ad Widget

ಹರಿಹರ ಪಲ್ಲತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ

. . . . . . . . .

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯದರ್ಶಿ ಸತೀಶ್ ಕೂಜುಗೋಡು, ಕೋಶಾಧಿಕಾರಿ ಚಂದ್ರಶೇಖರ ಪಾನತ್ತಿಲ, ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ ಲ| ಪ್ರೋ.ರಂಗಯ್ಯ ಶೆಟ್ಟಿಗಾರ್, ಆರ್.ಎಫ್ ಮನೋಜ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ, ಶಾಲಾ ಮುಖ್ಯೋಪಾಧ್ಯಾಯರಾದ ಶೇಷಪ್ಪ ಗೌಡ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಗಿಡ ನೆಡುವ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯದರ್ಶಿ ಸತೀಶ್ ಕೂಜುಗೋಡು ಸ್ವಾಗತಿಸಿ ಖಜಾಂಜಿ ಚಂದ್ರಶೇಖರ ಪಾನತ್ತಿಲ ವಂದನಾರ್ಪಣೆ ಮಾಡಿದರು. ಭಾರತಿ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ನಂತರ ಲಯನ್ಸ್ ಕ್ಲಬ್ ನ ವತಿಯಿಂದ ಸಿಹಿ ಊಟ ವಿತರಿಸಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading