ತೆಕ್ಕಿಲ್ ಕುಟುಂಬದ ಹಿರಿಯರಾದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ ಸಮಾರಂಭವು ಜು. 23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಟುಂಬ ಸಮ್ಮಿಲನ, ಸಾಧಕರಿಗೆ ಸನ್ಮಾನ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 50 ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಸಮಾರಂಭದಲ್ಲಿ ಕೇರಳ, ಕರ್ನಾಟಕ ರಾಜ್ಯದ ಸಚಿವರುಗಳು ವಿವಿಧ ಧಾರ್ಮಿಕ, ರಾಜಕೀಯ ಸಾಮಾಜಿಕ ಮುಖಂಡರುಗಳು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ಪ್ ಪ್ರಧಾನ ಕಾರ್ಯಕ್ರಮವನ್ನು ಜ| ಅಹಮ್ಮದ್ ದೇವರಕೋವಿಲ್ (ಮಾನ್ಯ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರು ಕೇರಳ) ರವರು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಶ್ಯಾಮ್ ಭಟ್ ಮಾಜಿ ಅಧ್ಯಕ್ಷರು ಕರ್ನಾಟಕ ಲೋಕಸಭಾ ಆಯೋಗ ಇವರು ಮಾಡಲಿರುವರು. ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದು, ಅಭಿನಂದನಾ ಭಾಷಣವನ್ನು ಲಯನ್ ಎಂ.ಬಿ ಸದಾಶಿವರವರು ಹಾಗೂ ತೆಕ್ಕಿಲ್ ಮಹಮ್ಮದ್ ಹಾಜಿಯವರ ಅನುಸ್ಮರಣೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಿವೃತ್ತ ಪ್ರಾಶುಪಾಲ ಕೆ.ಆರ್ ಗಂಗಾಧರ ಕುರುಂಜಿ ರವರು ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಟಿ.ಎಂ ಶಹೀದ್ ತೆಕ್ಕಿಲ್ (ಸ್ಥಾಪಕಾಧ್ಯಕ್ಷರು ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನ(ರಿ) ಅರಂತೋಡು) ಇವರು ವಹಿಸಲಿದ್ದು. ಅಲ್ಲದೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸುಳ್ಯದಲ್ಲಿ ಜು.14 ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ. ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ತೆಕ್ಕಿಲ್ ಕುಟುಂಬಸ್ಥರ ಒಕ್ಕೂಟದ ಅಧ್ಯಕ್ಷರಾದ ಇಬ್ರಾಹಿಂ ಬಿಯಫ್ ಚೊಕ್ಕಾಡಿ,ಪಟೇಲ್ ಟ್ರಸ್ಟ್ ಉಪಾಧ್ಯಕ್ಷ ಅಬ್ದುಲ್ ಖಾದರ್ ಪಟೇಲ್, ಸಂಪಾಜೆ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಉನೈಸ್ ಪೆರಾಜೆ, ಸಿದ್ದಿಕ್ ಕೊಕೊ ಮೊದಲಾದವರು ಉಪಸ್ಥಿತರಿದ್ದರು.