

ಐವರ್ನಾಡು ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೂಡಲೇ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.