ಸುಳ್ಯ ತಾಲೂಕಿನ ಬಹುತೇಕ ಪಂಚಾಯತ್ ಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಸರ್ವರ್ ಸಮಸ್ಯೆ, ತಾಂತ್ರಿಕ ಅಡಚಣೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಅಜ್ಜಾವರ ಗ್ರಾಮ ಪಂಚಾಯತ್ ಗೆ ತಾಲೂಕು ಕಾರ್ಯನಿರ್ವಾಹನಾ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೃಹ ಲಕ್ಷ್ಮಿ ಯೋಜನೆಯು ಪಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಪಂಚಾಯತ್ ಆಡಳಿತ ಸಿಬ್ಬಂದಿಗಳಿಗೆ ಸೂಚಿಸಿದರು. ಅಲ್ಲದೇ ಡಿಜಿಟಲ್ ಲೈಬ್ರರಿಗೆ ಭೇಟಿ ಮಾಡಿ ಡಿಜಿಟಲೀಕರಣದ ಕುರಿತು ಮಾಹಿತಿ ಸಂಗ್ರಹಿಸಿದರು. ಅಜ್ಜಾವರ ಗ್ರಾ.ಪಂ. ನಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದು ಸರಿಪಡಿಸಲು ಕ್ರಮ ಕೈಗೊಳ್ಳಲು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾ.ಪಂ.ಅಧ್ಯಕ್ಷರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಅಭಿವೃದ್ಧಿ ಅಧಿಕಾರಿ ಜಯಮಾಲಾ ಎ ಕೆ , ಲೈಬ್ರರಿಯನ್ ಕು.ಲಕ್ಷ್ಮಿ , ಕಾರ್ತಿಕ್ , ಹೇಮಾವತಿ , ಲೋಕೆಶ್ ಹಾಗೂ ನಾಗರಿಕರು ಉಪಸ್ಥಿತರಿದ್ದರು.