ಗಡಿಪಾರಿನ ಮೂಲಕ ಭಜರಂಗದಳವನ್ನು ಮಟ್ಟ ಹಾಕುತೇವೆ ಎಂದು ಹೊರಟಿರುವ ಪೊಲೀಸ್ ಇಲಾಖೆಯ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ.
ಭಜರಂಗದಳ ಕಾರ್ಯಕರ್ತರು ಧರ್ಮದ ರಕ್ಷಣೆಯ ಜತೆಗೆ ಸಮಾಜಮುಖಿ ಕೆಲಸ ಮಾಡುತ್ತಾ ನೆರೆ ಹಾಗೂ ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತ ಬಂದಿದ್ದಾರೆ. ಇಂತಹ ಕಾರ್ಯಕರ್ತರನ್ನು ಗಡಿ ಪಾರು ಮಾಡುವುದನ್ನು ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಖಂಡಿಸುತ್ತದೆ ಎಂದು ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Tuesday
- May 20th, 2025