ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ಬರೆ ಕುಸಿತದ ಪರಿಣಾಮ ಮಣ್ಣು ಚರಂಡಿಗೆ ಬಿದ್ದಿದ್ದು ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಸಮೀಪದ ಸವಿತಾ ಎಂಬುವವರ ಮನೆಗೆ ಅಪಾಯ ಎದುರಾಗಿತ್ತು. ಈ ಬಗ್ಗೆ ಜನತೆ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಇಂದು ಮುಂಜಾನೆಯೇ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಕೈ ಹಾಕಿದ್ದು, ಅಲ್ಲಿನ ಮಣ್ಣು ಸಂಪೂರ್ಣವಾಗಿ ತೆರವು ಮಾಡಲಾಗಿದೆ ಎಂದು ತಿಳಿದುಬಂದಿದೆ.
- Friday
- November 1st, 2024