ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬುವಿನಲ್ಲಿ ಮೆಂಡಾ ಪೌಂಡೇಷನ್ ಮತ್ತು ಎಸ್ & ಪಿ. ಗ್ಲೋಬಲ್ ಫೌಂಡೇಷನ್ (Menda Foundation and S & P Global Foundation) ನ ಪ್ರಾಯೋಜಕತ್ವದೊಂದಿಗೆ ಹಾಗೂ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಚೆಂಬು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಶಾಲೆಯಲ್ಲಿ “ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್” ಅನುಷ್ಠಾನ ಮಾಡಲಾಗಿದ್ದು ಇದರ ಉದ್ಘಾಟನೆಯನ್ನು ಕೊಡಗು ಜಿಲ್ಲಾ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು & ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಎ. ಎಸ್ ಪೊನ್ನಣ್ಣ ಇವರು ನೆರವೇರಿಸಿದರು.
ಶಾಸಕರಿಂದ ಈ ಯೋಜನೆಯನ್ನು ಅನುಷ್ಠಾನ ಮಾಡಿರುವ ಈ ಸಂಸ್ಥೆಗಳನ್ನು ಮತ್ತು ಗ್ರಾಮ ಪಂಚಾಯಿತಿಯನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ 2 ವರ್ಷದಿಂದ ಕಲಿಕಾ ಸಾಮಾಗ್ರಿಗಳನ್ನು ಉಚಿತವಾಗಿ ನೀಡುತ್ತಿದ್ದ ಯತೀಶ ಕುಂದಲ್ಪಾಡಿ ಇವರನ್ನು ಗೌರವಿಸಲಾಯಿತು. ಈ ಸಂದರ್ಭ ಮಾನ್ಯ ಶಾಸಕರಿಗೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚೆಂಬು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಕುಸುಮ ಎ, ಸದಸ್ಯರುಗಳಾದ ರಮೇಶ ಹುಲ್ಲುಬೆಂಕಿ, ವಸಂತ ಎನ್ ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ್ರು , ಎಸ್.ಡಿ.ಎಂ. ಸಿ ಅಧ್ಯಕ್ಷ ಲಕ್ಷ್ಮಣ ಜಿ ಆರ್, ಸೆಲ್ಕೋ ಸೋಲಾರ್ ಸಂಸ್ಥೆಯ ಮ್ಯಾನೇಜರ್ ಆಶಿಕ್ ಬಿ.ಎ ಉಪಸ್ಥಿತರಿದ್ದರು. ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳು,ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು, ಹಿರಿಯ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಸೆಲ್ಕೋ ಸೋಲಾರ್ ಸಿಬ್ಬಂದಿಗಳು, ಪೋಷಕರು, ಊರಿನವರು, ಮತ್ತಿತರರು ಹಾಜರಿದ್ದರು. ಶಾಲಾ ಮುಖ್ಯಶಿಕ್ಷಕರಾದ ಶ್ರೀ ಸೋಮಣ್ಣ ಕೆ ಆರ್ ಸ್ವಾಗತಿಸಿ, ವಿಕ್ರಾಂತ ಎಂ ಬಿ ನಿರೂಪಿಸಿ ವಂದಿಸಿದರು.